ಟಾಲಿವುಡ್ ನಟ ಅಲ್ಲು ಅರ್ಜುನ್ ಗೆ ಕೊರೊನಾ ಪಾಸಿಟಿವ್…

130
firstsuddi

ಹೈದರಾಬಾದ್ : ಟಾಲಿವುಡ್ ನಟ ಅಲ್ಲು ಅರ್ಜುನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಅಲ್ಲು ಅರ್ಜುನ್ ಅವರು, ನನಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮನೆಯಲ್ಲಿ ಐಸೋಲೇಟ್ ಆಗಿದ್ದೇನೆ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ. ನಾನು ಆರೋಗ್ಯವಾಗಿದ್ದೇನೆ. ಯಾರೊಬ್ಬರು ನನ್ನ ಕುರಿತು ಚಿಂತಿಸದಿರಿ ಎಂದು ಅಭಿಮನಿಗಳಲ್ಲಿ ಮನವಿ ಮಾಡಿದ್ದಾರೆ.