ಕೋಲಾರ : ಟಿಕ್ ಟಾಕ್ ವೀಡಿಯೋ ಮಾಡಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಜಿಲ್ಲೆಯ ವಡಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಾಲಾ ಎಂದು ಗುರುತಿಸಲಾಗಿದ್ದು, ಕೃಷಿ ಹೊಂಡದ ಬಳಿ ಟಿಕ್ ಟಾಕ್ ವೀಡಿಯೋ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಬಿದ್ದ ರಭಸಕ್ಕೆ ವಿದ್ಯಾರ್ಥಿನಿ ಕೃಷಿ ಹೊಂಡದಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದಾಳೆ ಎನ್ನಲಾಗಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.










