ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದ ಬಿಎಸ್‍ವೈ ನೇತೃತ್ವದ ಸರ್ಕಾರ…

196
firstsuddi

ಬೆಂಗಳೂರು : ಸರ್ಕಾರದ ವತಿಯಿಂದ ಆಚರಿಸುತ್ತಿದ್ದ ಟಿಪ್ಪು ಜಯಂತಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ರದ್ದುಗೊಳಿಸಿದ್ದು, 2016ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತಂದಿತ್ತು. ಟಿಪ್ಪು ಜಯಂತಿ ಆಚರಣೆ ವೇಳೆ ತೀವ್ರ ಘರ್ಷಣೆಗಳು ಉಂಟಾಗುವುದರಿಂದ ಶಾಸಕ ಕೆ.ಜಿ. ಬೋಪಯ್ಯ ಅವರು ಟಿಪ್ಪು ಜಯಂತಿಯನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು. ಅದರಂತೆ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದೆ.