ಟಿಪ್ಪು ಜಯಂತಿಯನ್ನು ರದ್ದು ಮಾಡಿರುವುದು ದ್ವೇಷದ ರಾಜಕಾರಣದಿಂದ ಅಲ್ಲ : ಕೆ.ಎಸ್. ಈಶ್ವರಪ್ಪ…

241
firstsuddi

ಶಿವಮೊಗ್ಗ : ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಟಿಪ್ಪು ಜಯಂತಿಯನ್ನು ರದ್ದು ಮಾಡಿರುವುದು ದ್ವೇಷದ ರಾಜಕಾರಣದಿಂದ ಅಲ್ಲ. ಸಿಎಂ ಯಡಿಯೂರಪ್ಪ ಅವರು ದ್ವೇಷದ ರಾಜಕಾರಣ ಮಾಡದೇ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಟಿಪ್ಪು ಜಯಂತಿ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದೇ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಇಲ್ಲದಿದ್ದರೆ ಟಿಪ್ಪು ಜಯಂತಿ ಹೆಸರಿನಲ್ಲಿ ಮತ್ತಷ್ಟು ಹೆಣಗಳು ಉರುಳುತ್ತಿದ್ದವು ಎಂದು ಹೇಳಿದ್ದು, ಬಳಿಕ ಸ್ಪೀಕರ್ ಅವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಬಗ್ಗೆ ಪ್ರತಿಕ್ರಯಿಸಿದ್ದು, ರಮೇಶ್ ಕುಮಾರ್ ಅವರು ಅನರ್ಹ ಶಾಸಕರ ಬಗ್ಗೆ ತೆಗೆದುಕೊಂಡಿರುವ ನಿರ್ಧಾರದಿಂದ ಸಂವಿಧಾನಕ್ಕೆ ದ್ರೋಹ ಮಾಡಿದ್ದಾರೆ. ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ರಮೇಶ್ ಕುಮಾರ್ ಅವರು ಸಂವಿಧಾನವನ್ನು ಉಳಿಸಿಬಿಟ್ಟಿದ್ದಾರೆ ಎಂದು ಕಿಡಿ ಕಾರಿದ್ದಾರೆ.