ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿ ಆತ್ಮಹತ್ಯೆ.

22

ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ ಎಂದು ಹೇಳಲಾಗುತಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಬೇಸರಗೊಂಡು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಮಾಹಿತಿ ತಿಳಿದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.