ಟಿ ಬಿ ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ ; ಪ್ರಾಣಾಪಾಯದಿಂದ ಪಾರು…

64
firstsuddi

ತುಮಕೂರು : ಮಾಜಿ ಸಚಿವ ಟಿ ಬಿ ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಮಾಜಿ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟಿ ಬಿ ಜಯಚಂದ್ರ ಅವರು ರಾತ್ರಿ ಶಿರಾದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ತುಮಕೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಸಿಬಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಫಾರ್ಚೂನರ್ ಕಾರು ರಸ್ತೆ ಬದಿಗೆ ಉರುಳಿ ಬಿದ್ದಿದೆ. ಗಾಯಗೊಂಡ ಜಯಚಂದ್ರ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ಗನ್ ಮ್ಯಾನ್ ಹಾಗೂ ಕಾರು ಚಾಲಕ ಅಪಘಾತದಿಂದ ಪಾರಾಗಿದ್ದಾರೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.