ಮುಂಬೈ : ಮೇ 30ರಿಂದ ಆರಂಭವಾಗುವ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಇಂದು ಇಂಗ್ಲೆಂಡ್ ಪ್ರವಾಸ ಕೈಗೊಳ್ಳುವುದಕ್ಕೂ ಮೊದಲು ಮುಂಬೈನ ಬಿಸಿಸಿಐ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ರವಿ ಶಾಸ್ತ್ರಿ ಅವರು ಟೀಂ ಇಂಡಿಯಾದ ಎಲ್ಲಾ ಆಟಗಾರರು ಉತ್ತಮ ಫಾರ್ಮ್‍ನಲ್ಲಿದ್ದಾರೆ. ವಿಶ್ವಕಪ್ಗೆ ಆಯ್ಕೆಯಾಗಿರುವ ತಂಡದ ಸದಸ್ಯರೆಲ್ಲರೂ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ. ಈ ಬಾರಿಯ ವಿಶ್ವಕಪ್ ಅತ್ಯಂತ ಸ್ಪರ್ಧಾತ್ಮಕವಾಗಿದ್ದು, ಉತ್ತಮ ಪ್ರದರ್ಶನ ನೀಡಿ ವಿಶ್ವಕಪ್ ಗೆಲ್ಲುವತ್ತ ಟೀಂ ಇಂಡಿಯಾ ಗಮನ ಹರಿಸುತ್ತಿದೆ ಎಂದು ತಿಳಿಸಿದ್ದಾರೆ.