ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿ ಆತ್ಮಹತ್ಯೆ…

42
firstsuddi

ಕೋಲಾರ: ಏಕಾಏಕಿ ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಜಗುಂಡ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಈತ ಹಿಂದಿ ಬಾಷೆ ಮಾತನಾಡುತ್ತಿದ್ದ ವ್ಯಕ್ತಿಯಾಗಿದ್ದು, ಮಾನಸಿಕನಂತೆ ಕಾಣುತ್ತಿದ್ದ ಎನ್ನಲಾಗಿದೆ.

ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.