ಹುಬ್ಬಳ್ಳಿ : ನಿಂತಿದ್ದ ಟ್ರ್ಯಾಕ್ಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಬುಡರಸಿಂಗಿ ಕ್ರಾಸ್ ಬಳಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಕಲ್ಮೇಶ ಯಂಕಮ್ಮನವರ (26) ಹಾಗೂ ಹಾವೇರಿ ಜಿಲ್ಲೆಯ ಕಲ್ಮೇಶ ಜಾಧವ (26) ಮೃತರು. ಇನ್ನೂ ಮುಂಡಗೋಡದ ವಿನಾಯಕ ಮಾನಾಬಾಯಿ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ರ್ಯಾಕ್ಟರ್ ಪಂಕ್ಚರ್ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದರು. ಇದೇ ಸಂದರ್ಭದಲ್ಲಿ ಮಹಾರಾಷ್ಟ್ರದ ಬಾವುಸಾಹೇಬ ಡಾಕನೆ ಎಂಬಾತ ಟ್ಯಾಂಕರ್ ಚಲಾಯಿಸಿಕೊಂಡು ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಟ್ರ್ಯಾಕ್ಟರ್ ಹಿಂದಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










