ಚಿತ್ರದುರ್ಗ : ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಮುರಾಘಮಠದ ಅನುಭವ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಡಾ.ಶಿವಮೂರ್ತಿ ಮುರುಘಾ ಶರಣರಿಂದ ಮರಣೋತ್ತರ ಬಸವಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಐದು ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುವ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿ ಪಡೆಯುವ ವೇಳೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾವುಕರಾದರು. ಶಿವಶರಣ ಮಾದಾರ ಚನ್ನಯ್ಯ ಮಠದ ಬಸವಮೂರ್ತಿ ಮಾದಾರ ಚನ್ನಯ್ಯಶ್ರೀ, ಕೃಷಿ ಸಚಿವ ಬಿ.ಸಿ.ಪಾಟೀಲ್, ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಎಂಎಲ್ ಸಿ ಕೆ.ಎಸ್.ನವೀನ್ ಸೇರಿ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.










