ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ದೆಹಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಸಮನ್ಸ್ ಜಾರಿ ಮಾಡಿದ್ದು, ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ದೆಹಲಿ ಕೋರ್ಟ್ ನ ವಿಶೇಷ ನ್ಯಾಯಾಧೀಶ ವಿಕಾಸ್ ಧುಲೆ ಡಿಕೆ ಶಿವಕುಮಾರ್ ಅವರಿಗೆ ನಿರ್ದೇಶನ ನೀಡಿದ್ದಾರೆ. ಡಿಕೆ ಶಿವಕುಮಾರ್ ಜೊತೆಗೆ ಸಚಿನ್ ನಾರಾಯಣ್, ಸುನೀಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರಗೆ ಸಮನ್ಸ್ ನೀಡಲಾಗಿದೆ. ಜಾರಿ ನಿರ್ದೇಶನಾಲಯದಿಂದ ಆರೋಪ ಪಟ್ಟಿ ದಾಖಲಾಗಿರುವ ಬೆನ್ನಲ್ಲೇ ಈ ಸಮನ್ಸ್ ಜಾರಿ ಮಾಡಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ಹಿಂದೆ 2019ರ ಸೆಪ್ಟೆಂಬರ್ ತಿಂಗಳಲ್ಲಿ ಡಿಕೆಶಿ ಬಂಧನವಾಗಿದ್ದರು. ಇದಾದ ಬಳಿಕ ಅಕ್ಟೋಬರ್ 23 ರಂದು ದೆಹಲಿ ಹೈಕೋರ್ಟ್ ನಿಂದ ಜಾಮೀನು ಪಡೆದು, ಹೊರಗೆ ಬಂದಿದ್ದರು.










