ಡಿಕೆಶಿ ಅವರಿಗೆ ಮತ್ತೊಂದು ಕಂಟಕ-ದೆಹಲಿಯ ನಿವಾಸದ ಮೇಲೆ ಸಿಬಿಐ ದಾಳಿ…

632
firstsuddi

ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ವಿಚಾರವಾಗಿ ತಿಹಾರ್ ಜೈಲ್‍ನಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದ್ದು, ಡಿ.ಕೆ ಶಿವಕುಮಾರ್ ಅವರ ದೆಹಲಿಯ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ದೆಹಲಿಯ ಹೈಕೋರ್ಟ್ ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಈ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಅರ್ಜಿ ವಿಚಾರಣೆಯ ತೀರ್ಪನ್ನು ಕಾಯ್ದಿರಿಸಿದ್ದಾರೆ. ಡಿಕೆಶಿ ಅವರು ಜಾಮೀನಿನ ಮೇಲೆ ಹೊರ ಬಂದರೂ ಸಿಬಿಐ ಅಧಿಕಾರಿಗಳು ಡಿಕೆಶಿ ಅವರನ್ನು ವಶಕ್ಕೆ ಪಡೆಯುವ ಸಾದ್ಯತೆಗಳಿವೆ.