ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ…

274
firstsuddi

ನವದೆಹಲಿ : ಅಕ್ರಮ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಶನಿವಾರಕ್ಕೆ ಮುಂದೂಡಿಕೆ ಮಾಡಿದೆ. ಇಡಿ ಪರ ವಕೀಲರಾದ ನಟರಾಜ್ ಅವರು ಒಂದು ಘಂಟೆಗೂ ಅಧಿಕ ಕಾಲ ವಾದವನ್ನು ಮಂಡಿಸಿದ್ದು, ವಕೀಲರ ವಾದವನ್ನು ಆಲಿಸಿದ ಕೋರ್ಟ್ ಶನಿವಾರ ಬೆಳಿಗ್ಗೆ 11ಗಂಟೆಗೆ ವಿಚಾರಣೆಯನ್ನು ಮುಂದೂಡಿದ್ದು, ಶನಿವಾರದವರೆಗೂ ಡಿ.ಕೆ. ಶಿವಕುಮಾರ್ ಅವರಿಗೆ ತಿಹಾರ್ ಜೈಲೇ ಗತಿಯಾಗಿದೆ.