ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ಸಂಬಂಧಿಸಿದಂತೆ ತಿಹಾರ್ ಜೈಲು ಸೇರಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿಯ ಹೈಕೋರ್ಟ್ ನಾಳೆಗೆ ಮುಂದೂಡಿದೆ. ಡಿಕೆಶಿ ಪರ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಅವರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ನ್ಯಾ. ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕ ಸದಸ್ಯ ಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.










