ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ಸಲ್ಲಿಸಿದೆ.
ಆದಾಯ ತೆರಿಗೆ ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
2019ರಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೆಹಲಿಯಲ್ಲಿ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸಿದ್ದರು. 50 ದಿನಗಳ ಕಾಲ ದೆಹಲಿಯ ತಿಹಾರ್ ಜೈಲಿನಲ್ಲಿದ್ದು ನಂತರ ದೆಹಲಿ ಹೈಕೋರ್ಟ್ ನಿಂದ ಜಾಮೀನು ಮೇಲೆ ಹೊರಬಂದಿದ್ದರು.










