ಡಿಕೆಶಿ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ಎಫ್ಐಆರ್ ದಾಖಲು…

57
firstsuddi

ಬೆಂಗಳೂರು: ಸಿಬಿಐ ತನಿಖೆಯ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಅಕ್ರಮ ಆಸ್ತಿಗಳಿಕೆ ಪ್ರಕರಣದ ತನಿಖೆಯ ಪೂರ್ವಾನುಮತಿಯನ್ನು ಹಿಂಪಡೆದ ಬಳಿಕ ಸರ್ಕಾರ ತನಿಖೆಯ ಜವಾಬ್ದಾರಿಯನ್ನು ಲೋಕಾಯುಕ್ತಕ್ಕೆ ನೀಡಿತ್ತು. ಈಗ ಲೋಕಾಯುಕ್ತ ಪೊಲೀಸರು ಫೆ.8 ರಂದು ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಲೋಕಾಯುಕ್ತ ನೀಡಿದ ನಿರ್ಧಾರ ಪ್ರಶ್ನಿಸಿ ಸಿಬಿಐ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ನೀಡಿದ್ದ ಆದೇಶವನ್ನು ಪ್ರಶ್ನಿಸಿದೆ.

ಒಂದೇ ಪ್ರಕರಣಕ್ಕೆ ಮತ್ತೊಂದು ಎಫ್ಐಆರ್ ಮಾಡಲು ಸಾಧ್ಯವಿಲ್ಲ. ಹೀಗಿರುವಾಗ ಲೋಕಾಯುಕ್ತಕ್ಕೆ ಕೊಟ್ಟಿರುವ ಆದೇಶ ಸರಿಯಲ್ಲ ಎಂದು ಸಿಬಿಐ ವಾದ ಮಂಡಿಸಿದೆ.