ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಒಡೆತನದ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.
ಬೆಂಗಳೂರಿನ ಆರ್ ಆರ್ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ಇ-ಮೇಲ್ ಮುಖಾಂತರ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಇಂದು ಶಾಲೆಯ ಇ-ಮೇಲ್ ಚೆಕ್ ಮಾಡಿದ ವೇಳೆ ಬೆದರಿಕೆ ಪತ್ರ ಬಂದಿರುವುದು ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.










