ಡಿಕೆ ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರ ಅಂಗೀಕಾರ…

58
firstsuddi

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ. 

ಡಿಕೆ ಶಿವಕುಮಾರ್ ಸಲ್ಲಿಸಿದ್ದ ನಾಲ್ಕು ನಾಮಪತ್ರಗಳು ಸ್ವೀಕೃತವಾಗಿವೆ. ನಾಮಪತ್ರದಲ್ಲಿ ಯಾವುದೇ ಲೋಪದೋಷಗಳಿಲ್ಲ. ಎಲ್ಲವೂ ಕ್ರಮಬದ್ಧವಾಗಿದೆ. ಹೀಗಾಗಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರವನ್ನು ಕನಕಪುರ ಚುನಾವಣಾಧಿಕಾರಿ ಮಾನ್ಯ ಮಾಡಿದ್ದಾರೆ.

ಡಿಕೆ ಶಿವಕುಮಾರ್ ನಾಮಪತ್ರ ತಿರಸ್ಕೃತ ಆತಂಕದ ಹಿನ್ನೆಲೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನಿನ್ನೆ ಡಿಕೆ ಸುರೇಶ್ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇದೀಗ ಡಿಕೆ ಶಿವಕುಮಾರ್ ನಾಮಪತ್ರ ಅಂಗೀಕಾರವಾಗಿದ್ದು, ಸೋಮವಾರ ಡಿಕೆ ಸುರೇಶ್ ನಾಮಪತ್ರ ಹಿಂಪಡೆಯಲಿದ್ದಾರೆ.