ಬೆಂಗಳೂರು : ನಗರದ ಕೆ.ಆರ್.ಮಾರ್ಕೆಟ್ ಫ್ಲೈಓವರ್ ಮೇಲೆ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಕಬೀರ್ ಪಾಷ ಸಾವನ್ನಪ್ಪಿದ ಬೈಕ್ ಸವಾರ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾನೆ.
ಇನ್ನು ಮೃತನ ಬೈಕ್ ನಲ್ಲಿ 8 ಮೊಬೈಲ್ ಗಳು ಪತ್ತೆಯಾಗಿದ್ದು, ಮೊಬೈಲ್ ಕಳ್ಳತನ ಮಾಡಿ ಎಸ್ಕೇಪ್ ಆಗುವ ವೇಳೆ ಅಪಘಾತ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೊಬೈಲ್ ಕಳ್ಳರೆಂಬ ಬಗ್ಗೆ ಮಾಹಿತಿ ಸಿಕ್ಕಿದ್ದು ಸಿಟಿ ಮಾರ್ಕೆಟ್ ಠಾಣೆ ಪೊಲೀಸರಿಂದ ತನಿಖೆ ಮುಂದುವರೆದಿದೆ.










