ಡಿ.ಕೆ. ಶಿವಕುಮಾರ್ ಅವರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು…

488
firstsuddi

ಮುಂಬೈ : ಅತೃಪ್ತ ಶಾಸಕರನ್ನು ಭೇಟಿ ಮಾಡಿ ಮನವೊಲಿಸಲು ಡಿ.ಕೆ ಶಿವಕುಮಾರ್ ಅವರು ಮುಂಬೈಗೆ ತೆರಳಿದ್ದು, ಇಂದು ಬೆಳಿಗ್ಗೆಯಿಂದ ಮುಂಬೈನ ರಿನೈಸೆನ್ಸ್ ಹೋಟೆಲ್ ಬಳಿ ಕುಳಿತಿದ್ದ ಡಿ.ಕೆ ಶಿವಕುಮಾರ್ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಿಗ್ಗೆ 8 ಗಂಟೆಗೆ ಮುಂಬೈನ ರಿನೈಸೆನ್ಸ್ ಹೋಟೆಲ್‍ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು ಎಷ್ಟೇ ಪ್ರಯತ್ನ ಮಾಡಿದರೂ ಅತೃಪ್ತ ಶಾಸಕರನ್ನು ಭೇಟಿ ಮಾಡಲು ಮುಂಬೈ ಪೊಲೀಸರು ನಿರಾಕರಿಸಿದ್ದರು. ಈ ವೇಳೆ ಹೋಟೆಲ್ ಮುಂಭಾಗದಲ್ಲಿ ಬಿಗುವಿನ ವಾತಾವರಣದಿಂದ ಹೋಟೆಲ್‍ನ ಸುತ್ತಮುತ್ತ ನಿಷೇದಾಜ್ಞೆ ಜಾರಿ ಇದ್ದರೂ ಡಿ.ಕೆ.ಶಿ ಅವರು ಯಾವುದೇ ಕಾರಣಕ್ಕೂ ನಾನು ವಾಪಸ್ ಹೋಗುವುದಿಲ್ಲ ಎಂದು ಹೋಟೆಲ್‍ನ ಮುಂಭಾಗದಲ್ಲಿ ಕುಳಿತು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಹೀಗಾಗಿ ಮುಂಬೈ ಪೊಲೀಸರು ಡಿ.ಕೆ. ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದು, ಸಚಿವ ಜಿ.ಟಿ ದೇವೇಗೌಡ, ಶಾಸಕರಾದ ಬಾಲಕೃಷ್ಣ ಹಾಗೂ ಶಿವಲಿಂಗೇಗೌಡರು ಹೋಟೆಲ್ ಮುಂಭಾಗದಲ್ಲೇ ಕುಳಿತಿದ್ದು, ಡಿ.ಕೆ. ಶಿವಕುಮಾರ್ ಅವರನ್ನು ಮಾತ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.