ಬೆಂಗಳೂರು: ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದ ಪರಿಣಾಮ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಜಕ್ಕೂರು ಹೆಲಿಪ್ಯಾಡ್ನಿಂದ ಮುಳಬಾಗಿಲಿಗೆ ಚುನಾವಣಾ ಪ್ರಚಾರಕ್ಕಾಗಿ ಶಿವಕುಮಾರ್ ಬೆಂಗಳೂರಿನಿಂದ ಕೋಲಾರಕ್ಕೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಮಾರ್ಗ ಮಧ್ಯೆ ಹದ್ದು ಬಂದು ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದಿದೆ.
ಹದ್ದು ಡಿಕ್ಕಿ ಹೊಡೆದ ರಭಸಕ್ಕೆ ಹೆಲಿಕಾಪ್ಟರ್ ಮುಂದಿನ ಗಾಜು ಪುಡಿ ಪುಡಿಯಾಗಿದೆ. ಕೂಡಲೇ ಎಚ್ಚೆತ್ತ ಪೈಲಟ್ ಎಚ್ಎಎಲ್ನಲ್ಲಿ ಹೆಲಿಕಾಪ್ಟರ್ ಅನ್ನು ತುರ್ತು ಭೂಸ್ಪರ್ಶ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಹೆಲಿಕಾಪ್ಟರ್ನಿಂದ ಇಳಿದ ಡಿಕೆ ಶಿವಕುಮಾರ್ ಕಾರು ಮೂಲಕ ಮುಳಬಾಗಿಲು ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ.










