ನವದೆಹಲಿ: ಇಂದು ಕಾಂಗ್ರೆಸ್ನ ಡಿ.ಕೆ.ಸುರೇಶ್ ಸೇರಿದಂತೆ ಮೂವರು ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ.
ಸಂಸದರಾದ ಡಿ.ಕೆ.ಸುರೇಶ್, ನಕುಲ್ ನಾಥ್ ಮತ್ತು ದೀಪಕ್ ಬೈಜ್ ಅವರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ. ಇಲ್ಲಿವರೆಗೆ ಅಮಾನತುಗೊಂಡ ಸಂಸದರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ.
ಸಂಸತ್ ಭದ್ರತಾ ಲೋಪ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕು ಎಂದು ಆಗ್ರಹಿಸಿ ವಿಪಕ್ಷಗಳ ಸಂಸದರು ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಲಾಪಕ್ಕೆ ಅಡ್ಡಿಪಡಿಸಿದ್ದಾರೆಂದು ಹಲವು ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿತ್ತು.
ಈ ಅಮಾನತು ಪ್ರಕ್ರಿಯೆ ಮುಂದುವರಿದಿದೆ. ಇಂದು ಸಹ ಕರ್ನಾಟಕದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಸೇರಿ ಮೂವರು ಅಮಾನತುಗೊಂಡಿದ್ದಾರೆ.










