ಹಾಸನ : ಡೆತ್ ನೋಟ್ ಬರೆದಿಟ್ಟು ಸಕಲೇಶಪುರ ಪುರಸಭೆ ಕಂದಾಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿ ನಡೆದಿದ್ದು, ಸಿ.ಟಿ.ಗೋಪಾಲಕೃಷ್ಣ(41) ನೇಣಿಗೆ ಶರಣಾದ ಅಧಿಕಾರಿ.
ಗೋಪಾಲಕೃಷ್ಣ ಅವರು ನಗರದ ಹೊರವಲಯದ ಚಿಕ್ಕಕೊಂಡಗೊಳ ನಿವಾಸಿಯಾಗಿದ್ದು, ಕಳೆದ ಎರಡು ವರ್ಷಗಳಿಂದ ಸಕಲೇಶಪುರ ಪುರಸಭೆ ಕಂದಾಯ ಅಧಿಕಾರಿಯಾಗಿದ್ದರು. ನನಗೆ ಬದುಕಲು ಇಷ್ಟವಿಲ್ಲ, ಆದ್ದರಿಂದ ಸಾಯುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ಗೋಪಾಲಕೃಷ್ಣ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ್ದಾರೆ.
ಘಟನೆ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.










