ಡೆತ್ ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ!

78
firstsuddi

ಬೆಳಗಾವಿ : ಡೆತ್ ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ.

ಸುರೇಖಾ ಶ್ರೀನಾಥ್ ನಾಯಕ (21) ಮೃತ ದುರ್ದೈವಿ. ನಿನ್ನ ಕಾಲ್ಗುಣ ಸರಿಯಿಲ್ಲ, ನೀನು ಅಪಶಕುನ ಎಂದು ಪತಿ, ಅತ್ತೆ – ಮಾವ ನಿರಂತರ ಕಿರುಕುಳ ನೀಡುತ್ತಿದ್ದರು. ಪತಿಯ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತ ಸುರೇಖಾ ಡೆತ್ ನೋಟ್ ಬರೆದಿಟ್ಟು ನಾಲ್ಕು ದಿನಗಳ ಹಿಂದೆಯೇ ಮನೆ ಬಿಟ್ಟು ಹೋಗಿದ್ದರು.

ನಿನ್ನೆ ನಿಡಗುಂದಿ ಗ್ರಾಮದಿಂದ ಮೂರು ಕಿ.ಮೀ ದೂರದ ತೋಟದಲ್ಲಿರುವ ಬಾವಿಯಲ್ಲಿ ಸುರೇಖಾ ಶವವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.