ವಾಷಿಂಗ್ಟನ್: ದಕ್ಷಿಣ ಅಮೆರಿಕದ ಟೆಕ್ಸಾಸ್ನಲ್ಲಿರುವ ಡೈರಿ ಫಾರ್ಮ್ನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 18 ಸಾವಿರ ಜಾನುವಾರುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸ್ಫೋಟದ ಬಳಿಕ ಸ್ಥಳದಲ್ಲಿ ಭಾರೀ ಬೆಂಕಿ ಉದ್ಭವವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು, ಫಾರ್ಮ್ನಲ್ಲಿ ಸಿಲುಕಿಕೊಂಡಿದ್ದ ಒಬ್ಬ ವ್ಯಕ್ತಿಯನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಜಮೀನಿಗೆ ಹೋಗುವ ದಾರಿಯನ್ನು ಮುಚ್ಚಲಾಗಿದೆ. ಇದು ಟೆಕ್ಸಾಸ್ ಇತಿಹಾಸದಲ್ಲೇ ಭಯಾನಕ ಸ್ಫೋಟ ಎಂದು ಹೇಳಲಾಗಿದೆ.
ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಬಗ್ಗೆ ಡೈರಿಯ ಮಾಲೀಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.










