ಡ್ರಗ್ಸ್ ಕೇಸ್ – ಜೈಲಿನಿಂದ ಬಿಡುಗಡೆಯಾದ ಶಾರೂಖ್ ಪುತ್ರ ಆರ್ಯನ್ ಖಾನ್.

92
firstsuddi

ಮುಂಬೈ : ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಇಂದು ಮುಂಬೈಯ ಅರ್ಥೂರ್ ರೋಡ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.  ಇಂದು ಬೆಳಗ್ಗೆ ಮುಂಬೈನ ಆರ್ಥರ್ ರೋಡ್ ಜೈಲು ಅಧಿಕಾರಿಗಳಿಗೆ ಜಾಮೀನು ಪ್ರತಿ ತಲುಪಿದ್ದು, ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಬಳಿಕ ಆರ್ಯನ್ ಖಾನ್ ಮತ್ತು ಆತನ ಜೊತೆ ಜಾಮೀನು ಹೊಂದಿದ್ದವರನ್ನು ಬಿಡುಗಡೆ ಮಾಡಿದ್ದಾರೆ.

ಆರ್ಯನ್ ಖಾನ್ ಗೆ ಜಾಮೀನು ನೀಡಿರುವ ಬಾಂಬೆ ಹೈಕೋರ್ಟ್ 14 ಷರತ್ತುಗಳನ್ನು ವಿಧಿಸಿದೆ. ಐದು ಪುಟಗಳ ಆದೇಶದಲ್ಲಿ ಬಾಂಬೆ ಹೈಕೋರ್ಟ್, ಆರ್ಯನ್ ಖಾನ್ ಮತ್ತು ಇತರ ಇಬ್ಬರು ಸಹ ಆರೋಪಿಗಳಾದ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚ ಅವರನ್ನು 1 ಲಕ್ಷ ರೂಪಾಯಿ ವೈಯಕ್ತಿಕ ಶ್ಯೂರಿಟಿಗಳೊಂದಿಗೆ ಬಿಡುಗಡೆ ಮಾಡಲಾಗಿದೆ.

ಹೈಕೋರ್ಟ್ ನಿಗದಿಪಡಿಸಿದ ಷರತ್ತುಗಳ ಪ್ರಕಾರ, ಮೂವರು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯದ ಮುಂದೆ ತಮ್ಮ ಪಾಸ್‌ಪೋರ್ಟ್‌ಗಳನ್ನು ಒಪ್ಪಿಸಬೇಕು ಮತ್ತು ವಿಶೇಷ ನ್ಯಾಯಾಲಯದಿಂದ ಅನುಮತಿ ಪಡೆಯದೆ ಭಾರತವನ್ನು ತೊರೆಯಬಾರದು. ಪ್ರತಿ ಶುಕ್ರವಾರ ಎನ್‌ಸಿಬಿ ಕಚೇರಿಗೆ ಹಾಜರಾಗಬೇಕು ಎಂಬ ನಿಯಮವನ್ನು ಹೇರಲಾಗಿದೆ.

ಮುಂಬೈ ಕ್ರೂಸ್ ಹಡಗಿನಲ್ಲಿ ಡ್ರಗ್ ದಾಳಿಯ ವೇಳೆ ಆರ್ಯನ್ ಖಾನ್ ಅವರನ್ನು ಎನ್ಸಿಬಿ ಅಧಿಕಾರಿಗಳು ಅಕ್ಟೋಬರ್ 2 ರಂದು ಬಂಧಿಸಿದ್ದರು. ಅಕ್ಟೋಬರ್ 8 ರಿಂದ ಅರ್ಥರ್ ಜೈಲಿನಲ್ಲಿರುವ ಆರ್ಯನ್ ಖಾನ್ ಗೆ  ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.