ಮಂಗಳೂರು : ಡ್ರಗ್ಸ್ ದಂಧೆಯಿಂದ ಮಗಳನ್ನು ಪಾರು ಮಾಡುವಂತೆ ಮಹಿಳೆಯೊಬ್ಬರು ವಿಶ್ವ ಹಿಂದೂ ಪರಿಷತ್ ಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ಸಂಬಂಧ ವಿಎಚ್ ಪಿ ಮುಖಂಡರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಆರೋಪಿಯನ್ನು ಬಂಧಿಸಿಲಾಗಿದೆ. ಸುರತ್ಕಲ್, ಕಾಟಿಪಳ್ಳ ನಿವಾಸಿ ಮಹಮ್ಮದ್ ಶರೀಫ್ (47) ಬಂಧಿತ ಆರೋಪಿ.
ಪತ್ರದಲ್ಲೇನಿದೆ?
ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬವರು ಕಳೆದ ಮೂರು ವರ್ಷದಿಂದ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬವನು ಮಗಳನ್ನು ಪುಸಲಾಯಿಸಿ ಡ್ರಗ್ಸ್ ನೀಡಿ ಲೈಂಗಿಕವಾಗಿ ದುರ್ಬಳಕೆ ಮಾಡುತ್ತಿದ್ದಾನೆ. ಇದರಿಂದಾಗಿ ಅವಳು ಡ್ರಗ್ಸ್ ಚಟಕ್ಕೆ ಬಿದ್ದು ಅವಳ ಆರೋಗ್ಯ ಹದಗೆಟ್ಟಿದೆ ಮತ್ತು ಮಾನಸಿಕವಾಗಿ ಅಸ್ವಸ್ಥಳಾಗಿದ್ದಾಳೆ. ಕೃತ್ಯದ ಬಗ್ಗೆ ಈ ಹಿಂದೆಯೂ ಕೂಡ ನಾನು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದೇನೆ ಮತ್ತು ನಮ್ಮ ಸಮುದಾಯದ ಗುರುಗಳಿಗೂ ದೂರು ಕೊಟ್ಟಿದ್ದೇನೆ. ಆದರೂ ನನ್ನ ಮಗಳಿಗೆ ನ್ಯಾಯ ಸಿಗಲಿಲ್ಲ. ಆದುದರಿಂದ ನನ್ನ ಮಗಳನ್ನು ರಕ್ಷಿಸಿ ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.










