ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ ಅನುಶ್ರೀ ಅವರ ಬಗ್ಗೆ ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದ್ದು, ಸಿಸಿಬಿ ನೊಟೀಸ್ ನೀಡಿದ ದಿನವೇ ಅನುಶ್ರೀ ಅವರು ಪ್ರಭಾವಿ ರಾಜಕಾರಣಿಗಳಿಗೆ ಕರೆ ಮಾಡಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಸೆ.24ರಂದು ಅನುಶ್ರೀ ಅವರಿಗೆ ನೊಟೀಸ್ ಕಳುಹಿಸಿದ್ದರು. ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು ಅನುಶ್ರೀ ಅವರ ಮೊಬೈಲ್ ಸಿಮ್‍ಗಳನ್ನು ವಶಕ್ಕೆ ಪಡೆದಿದ್ದರು. ತನಿಖೆ ನಡೆಸಿದ ಪೊಲೀಸರು ಅನುಶ್ರೀ ಅವರು ತಮಗೆ ಸಿಸಿಬಿ ನೊಟೀಸ್ ಬಂದ ಕ್ಷಣವೇ ಮೂವರು ಪ್ರಭಾವಿ ರಾಜಕಾರಣಿಗಳಿಗೆ ಕರೆ ಮಾಡಿರುವುದು ಬೆಳಕಿಗೆ ಬಂದಿದೆ.
ಆ ಮೂವರು ಪ್ರಭಾವಿ ರಾಜಕಾರಣಿಗಳು ಯಾರು..?
ಅನುಶ್ರೀ ಅವರು ತಮಗೆ ನೊಟೀಸ್ ಬರುತ್ತಿದ್ದಂತೆ ರಾಜ್ಯದಲ್ಲಿ 2 ಬಾರಿ ಮುಖ್ಯಮಂತ್ರಿಯಾಗಿದ್ದ ಮಾಜಿ ಮುಖ್ಯಮಂತ್ರಿಗೆ ಕರೆ ಮಾಡಿದ್ದಾರೆ. ಹಾಗೂ ಮತ್ತೊಬ್ಬ ಮಾಜಿ ಮುಖ್ಯಮಂತ್ರಿಯ ಮಗ ಹಾಗೂ ಕರಾವಳಿಯ ಪ್ರಭಾವಿ ರಾಜಕಾರಣಿಗೆ ಕರೆ ಮಾಡಿರುವುದು ಬೆಳಕಿಗೆ ಬಂದಿದ್ದು, ಆದರೆ ಅನುಶ್ರೀ ಅವರು ಮೂವರು ರಾಜಕಾರಣಿಗಳಿಗೆ ಕರೆ ಮಾಡಿದ್ದೇಕೆ? ಅಧಿಕಾರಿಗಳೊಂದಿಗೆ ಅನುಶ್ರೀ ಯಾವ ವಿಷಯದ ಕುರಿತು ಚರ್ಚೆ ಮಾಡಿದ್ದಾರೆ? ಎಂಬುವುದರ ಬಗ್ಗೆ ಪೊಲೀಸ್ ತನಿಖೆ ವೇಳೆ ತಿಳಿಯಬೇಕಿದೆ.










