ಡ್ರಗ್ ಪ್ರಕರಣ-ಖ್ಯಾತ ನಿರೂಪಕಿ ಅನುಶ್ರೀ ಅವರಿಗೂ ಸಿಸಿಬಿ ನೊಟೀಸ್…

170
firstsuddi

ಬೆಂಗಳೂರು : ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ನೊಟೀಸ್ ನೀಡಿದ್ದಾರೆ. ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಈ ಹಿಂದೆ ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗೂ ಖ್ಯಾತ ಕೋರಿಯಾಗ್ರಾಫರ್ ತರುಣ್ ಅವರನ್ನು ಬಂಧಿಸಿದ್ದರು. ಈ ಇಬ್ಬರ ವಿಚಾರಣೆ ವೇಳೆ ಸಾಕಷ್ಟು ಮಾಹಿತಿಯನ್ನು ಕಲೆ ಹಾಕಿರುವ ಸಿಸಿಬಿ ಪೊಲೀಸರು ನಿರೂಪಕಿ ಅನುಶ್ರೀ ಅವರಿಗೆ ವಾಟ್ಸಪ್ ಮೂಲಕ ನೊಟೀಸ್ ನೀಡಿದ್ದಾರೆ. ಅಲ್ಲದೇ ಕೆಲವು ಸಿಸಿಬಿ ಅಧಿಕಾರಿಗಳು ನೇರವಾಗಿ ಅನುಶ್ರೀ ಅವರಿಗೆ ನೊಟೀಸ್ ನೀಡಲು ಬೆಂಗಳೂರಿಗೆ ತೆರಳಿದ್ದಾರೆ ಎನ್ನಲಾಗಿದೆ.