ಧಾರವಾಡ : ಅಪ್ರಾಪ್ತ ಬಾಲಕನೋರ್ವ ತನ್ನ ತಂದೆಯನ್ನೇ ಕೊಲೆಗೈದಿರುವ ಘಟನೆ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ನಡೆದಿದೆ.
ಪುಂಡಲೀಕ ಒಂಟಿಗಡ ಮೃತ ದುರ್ದೈವಿ. ಪುಂಡಲೀಕ ಪ್ರತಿನಿತ್ಯ ಕುಡಿದು ಬಂದು ಹೆಂಡತಿ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿ ಕೂಡ ಇದೇ ರೀತಿ ಪುಂಡಲೀಕ ಜಗಳವಾಡಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿ ಸ್ವತಃ ಮಗನೇ ತನ್ನ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










