ತಂದೆಯ ಸಾವಿನ ಸುದ್ದಿ ಕೇಳಿ ಕೆರೆಗೆ ಹಾರಿ ಪ್ರಾಣ ಬಿಟ್ಟ ಮಗ!

101
firstsuddi

ಮಡಿಕೇರಿ : ತಂದೆಯ ಸಾವಿನ ಸುದ್ದಿ ಕೇಳಿ ಮಗನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ವಿರಾಜಪೇಟೆಯ ತಾಲೂಕಿನ ಬಿಳುಗುಂದ ಗ್ರಾಮದಲ್ಲಿ ನಡೆದಿದೆ.

ತಂದೆ ಸುಬ್ಬಯ್ಯ (75) ಹಾಗೂ ಪುತ್ರ ಗಿರೀಶ್ ಗಣಪತಿ (36) ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ತಂದೆ ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ಏರ್ಪಟ್ಟಿದ್ದು, ಪುತ್ರ ನಿಂದಿಸಿದ ಎಂಬ ಕಾರಣಕ್ಕೆ ತಂದೆ ಸುಬ್ಬಯ್ಯ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ತಂದೆ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳುತ್ತಿದ್ದಂತೆ ಪುತ್ರ ಗಿರೀಶ್ ತೋಟದ ಕೆರೆಗೆ ಹಾರಿ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.