ಬೆಂಗಳೂರು : ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್‍ನನ್ನು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತರುವಾಗ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಆ್ಯಸಿಡ್ ನಾಗನ ಕಾಲಿಗೆ ಕಾಮಾಕ್ಷಿಪಾಳ್ಯ ಪೊಲೀಸರು ಗುಂಡು ಹೊಡೆದಿದ್ದಾರೆ.
ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಬಳಿಕ ತಮಿಳುನಾಡಿನ ತಿರುಮಣ್ಣಾಮಲೈಯಲ್ಲಿರುವ ಆಶ್ರಮವೊಂದರಲ್ಲಿ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸಿದಾಗ ಆಶ್ರಮವೊಂದರಲ್ಲಿ ಇರುವ ಬಗ್ಗೆ ಸುಳಿವು ದೊರೆತಿತ್ತು. ಬಳಿಕ ಆತನನ್ನು ಪೊಲೀಸರು ಬಂಧಿಸಿ ರಾತ್ರಿ ನಗರಕ್ಕೆ ಕರೆದುಕೊಂಡು ಬರುವಾಗ ಮೂತ್ರ ವಿಸರ್ಜನೆಗೆ ನಿಲ್ಲಿಸಿ ಅಂತ ನೈಸ್ ರೋಡಲ್ಲಿ ಕೇಳಿಕೊಂಡಿದ್ದ. ಇದಕ್ಕೆ ಅವಕಾಶ ಕೊಡದ ಪೊಲೀಸರು, ಬೆಂಗಳೂರು ಸಿಟಿಯ ಕೆಂಗೇರಿ ಮೇಲ್ಸೇತುವೆ ಬಳಿ ನಿಲ್ಲಿಸಿದ್ರು. ಈ ವೇಳೆ ಆರೋಪಿಯನ್ನ ಹಿಡಿಯಲು ಗಾಳಿಯಲ್ಲಿ ಒಮ್ಮೆ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದರು. ಆದ್ರೂ ತಪ್ಪಿಸಿಕೊಳ್ಳಲು ಮುಂದದಾಗ ಆರೋಪಿ ಬಲಗಾಲಿಗೆ ಇನ್ಸ್ ಪೆಕ್ಟರ್ ಪ್ರಶಾಂತ್ ಸರ್ವಿಸ್ ಪಿಸ್ತೂಲ್ ನಿಂದ ಗುಂಡು ಹೊಡೆದಿದ್ದಾರೆ.
ಗುಂಡೇಟು ತಿಂದ ಆರೋಪಿ ಆರೋಪಿ ನಾಗೇಶ್ ಗೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.