ಚೆನ್ನೈ : ತಮಿಳಿನ ಸ್ಟಾರ್ ನಟ ಅಜಿತ್ ಕುಮಾರ್ ಅವರಿಗೆ ಶೂಟಿಂಗ್ ವೇಳೆ ಬೈಕ್ ಅಪಘಾತವಾಗಿದ್ದು, ಅಜಿತ್ ಅವರು ಶೀಘ್ರ ಗುಣಮುಖರಾಗಲೆಂದು ಅಜಿತ್ ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕರಾದ ಹೆಚ್.ವಿನೋದ್ ಅವರು ನಿರ್ದೇಶಿಸುತ್ತಿರುವ ಸಿನಿಮಾದಲ್ಲಿ ಅಜಿತ್ ಅವರು ಬ್ಯುಸಿಯಾಗಿದ್ದು, ಈ ವೇಳೆ ಚೆನ್ನೈನಲ್ಲಿ ನಡೆಯುತ್ತಿರುವ ಸಾಹಸ ಸನ್ನಿವೇಶವನ್ನು ಚಿತ್ರೀಕರಿಸುತ್ತಿದ್ದಾಗ ಅಜಿತ್ ಅವರು ಚಲಾಯಿಸುತ್ತಿದ್ದ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಅಜಿತ್ ಅವರ ಅಭಿಮಾನಿಗಳು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಅಜಿತ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ #GetWellSoonTHALA ಎಂಬ ಹ್ಯಾಷ್‍ಟ್ಯಾಗ್ ಮೂಲಕ ಅಭಿಯಾನವನ್ನು ಆರಂಭಿಸಿದ್ದಾರೆ.










