ತಮಿಳುನಾಡಿನಲ್ಲಿ ಮಳೆ ಆರ್ಭಟ ; ಶಾಲಾ-ಕಾಲೇಜುಗಳಿಗೆ ರಜೆ…

96
firstsuddi

ಚೆನ್ನೈ : ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಸರ್ಕಾರ ತಮಿಳುನಾಡು ಮತ್ತು ಪುದುಚೇರಿಯ ಹಲವಾರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರವು ಚೆನ್ನೈ, ತಿರುವಳ್ಳೂರ್ ಮತ್ತು ಕಾಂಚೀಪುರಂ ಸೇರಿದಂತೆ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ನವೆಂಬರ್ 13ರವರೆಗೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ತಿಂಗಳಲ್ಲಿ ಇದು ಎರಡನೇ ಬಾರಿಗೆ ತಮಿಳುನಾಡಿನಲ್ಲಿ ಮಳೆಯಿಂದಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನವೆಂಬರ್ 2ರಂದು ಚೆನ್ನೈ, ರಾಣಿಪೇಟ್, ತಿರುವಳ್ಳೂರು, ವೆಲ್ಲೂರು, ಕಾಂಚೀಪುರಂ, ವಿಲ್ಲುಪುರಂ, ತಿರುವಣ್ಣಾಮಲೈ ಮತ್ತು ಚೆಂಗಲ್ಪಟ್ಟು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಶಾಲೆಗಳನ್ನು ಮುಚ್ಚಲಾಗಿತ್ತು.