ತರಬೇತಿ ನಿರತರಾಗಿದ್ದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ…

164
firstsuddi

ಬೆಳಗಾವಿ : ತರಭೇತಿ ನಿರತರಾಗಿದ್ದ ಯೋಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮೃತ ಯೋಧನನ್ನು ಹರಿಯಾಣ ಮೂಲದ ಅಮೀರ್ ಖಾನ್ ಎಂದು ಗುರುತಿಸಲಾಗಿದ್ದು, ಇವರು ಬೆಳಗಾವಿಯ ಸಾಂಬ್ರಾದಲ್ಲಿರುವ ಏರ್‍ಫೋರ್ಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದರು. ತರಬೇತಿ ಶಾಲೆಯ ಗಾರ್ಡ್ ರೂಮ್‍ನಲ್ಲಿ ತಮಗೆ ತಾವೇ ರೈಫಲ್‍ನಿಂದ ಗುಂಡು ಹಾರಿಸಿಕೊಂಡಿದ್ದು, ಕೂಡಲೇ ಸಹವರ್ತಿಗಳು ಯೋಧನನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆಗೂ ಮುನ್ನವೇ ಯೋಧ ಮೃತಪಟ್ಟಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.