ಚಿಕ್ಕಮಗಳೂರು : ಟವೇರಾ ಕಾರು ಹಾಗೂ ಮಾರುತಿ ವರ್ಸಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಶಿವಪುರ ಡಾಬಾ ಬಳಿ ನಡೆದಿದೆ. ಮುನಿರಾಜು (65), ಜ್ಯೋತಿ (14) ಹಾಗೂ ಸುಬ್ಬಲಕ್ಷ್ಮಿ(60) ಮೃತ ದುರ್ಧೈವಿಗಳು. ಸಿಗಂದೂರು ದೇವಾಲಯದಿಂದ ಶಿಡ್ಲಘಟ್ಟಕ್ಕೆ ಹೋಗುವಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಮೂಲದವರು ಎಂದು ತಿಳಿದು ಬಂದಿದೆ. ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










