ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಕೊರಿಯರ್ ಬಾಯ್ ಕೊಲೆ…

44
firstsuddi

ಬೆಂಗಳೂರು: ತಲೆಯ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ಇಂದು ಬೆಳಗಿನ ಜಾವ ಹಲಸೂರು ಠಾಣಾ ವ್ಯಾಪ್ತಿಯ ದೊಮ್ಮಲೂರು ಸಮೀಪದ ಬಿಡಿಎ ಪಾರ್ಕ್ ಬಳಿ ನಡೆದಿದೆ.

ಶಿವಾಜಿನಗರದ ನಿವಾಸಿ ಸತೀಶ್ ಕುಮಾರ್ (32) ಹತ್ಯೆಯಾದ ದುರ್ದೈವಿ. ಕೊರಿಯರ್ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಸತೀಶ್ ಕುಮಾರ್ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ.

ಸುದ್ದಿ ತಿಳಿದು ಸ್ಥಳಕ್ಕೆ ಹಲಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಪತ್ತೆ ಕಾರ್ಯ ಮುಂದುವರೆಸಿದ್ದಾರೆ.