ತಲ್ವಾರ್ ನಿಂದ ಕೇಕ್ ಕತ್ತರಿಸಿದ ಬಿಜೆಪಿ ಮುಖಂಡ…

368
firstsuddi

ಕಲಬುರಗಿ : ಬಿಜೆಪಿ ಮುಖಂಡ ಹಾಗೂ ಶ್ರೀರಾಮ ಸೇನೆಯ ತಾಲ್ಲೂಕು ಅಧ್ಯಕ್ಷ ಶರಣು ಕೋಳಕುರ ಅವರು ತಮ್ಮ ಹುಟ್ಟುಹಬ್ಬದ ವೇಳೆ ತಲ್ವಾರ್ ನಿಂದ ಕೇಕ್ ಕತ್ತರಿಸಿ ವಿವಾದ ಸೃಷ್ಟಿಸಿರುವ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ. ಬಿಜೆಪಿ ಮುಖಂಡ ಶರಣು ಕೋಳುಕುರ ಅವರು ಕಳೆದ 2 ದಿನದ ಹಿಂದೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಕಾರ್ಯಕರ್ತರ ಜೊತೆ ಸೇರಿ ತಲ್ವಾರ್ ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದು, ಅಲ್ಲದೇ ಹುಟ್ಟುಹಬ್ಬ ಸಮಾರಂಭಕ್ಕೆ ಆಗಮಿಸಿದ ಕಾರ್ಯಕರ್ತರು ಕೂಡಾ ತಲ್ವಾರ್ ಹಿಡಿದು ಫೋಟೋಗೆ ಫೋಸ್ ನೀಡಿದ್ದು, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.