ಮಂಡ್ಯ : ತಾಯಿಯ ಅಸ್ತಿ ವಿಸರ್ಜನೆಗೆಂದು ಆಗಮಿಸಿದ್ದ ಮಗ ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗಂಜಾಂ ಬಳಿ ಕಾವೇರಿ ನದಿಯಲ್ಲಿ ನಡೆದಿದೆ. ಬೆಂಗಳೂರಿನ ರಾಜಾಜಿ ನಗರದ ನಿವಾಸಿ ಶ್ರೀಕಾಂತ್(45) ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ ಎನ್ನಲಾಗಿದ್ದು, ಶ್ರೀಕಾಂತ್ ಅವರು ತಮ್ಮ ತಾಯಿಯ ಅಸ್ಥಿ ವಿಸರ್ಜಿಸಲು ಕಾವೇರಿ ನದಿಗೆ ಇಳಿದಿದ್ದು, ಈ ವೇಳೆ ನೀರಿನ ರಭಸಕ್ಕೆ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಶೋಧ ಕಾರ್ಯ ನಡೆಸುತ್ತಿದ್ದು, ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










