ಚಾಮರಾಜನಗರ: ಮಹಿಳೆ ಮತ್ತು ಇಬ್ಬರು ಮಕ್ಕಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ಪತಿ ಹಾಗೂ ಆತನ ಕುಟುಂಬಸ್ಥರು ಕೃತ್ಯ ಎಸಗಿದ್ದಾರೆ ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ.
ಮೇಘಾ (24), ಪುನ್ವಿತಾ (6) ಹಾಗೂ ಮನ್ವಿತಾ (3) ಅನುಮಾನಾಸ್ಪದವಾಗಿ ಮೃತ ಪಟ್ಟವರು. ಕೌಟುಂಬಿಕ ಕಲಹ ಹಿನ್ನಲೆ ಮೇಘ ಪತಿ ಅಭಿ ಅಲಿಯಾಸ್ ಧನಂಜಯ, ಈತನ ತಾಯಿ ನಿರ್ಮಲಮ್ಮ, ಹಾಗೂ ತಂದೆ ಮಲ್ಲಿಕಾರ್ಜುನ ಮತ್ತು ತಮ್ಮ ಪುಟ್ಟು ಸೇರಿ ತನ್ನ ಮಗಳು ಹಾಗೂ ಆಕೆಯ ಇಬ್ಬರು ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದಿದ್ದಾರೆ ಎಂದು ಮೃತ ಮೇಘಾಳ ತಾಯಿ ಆರೋಪಿಸಿದ್ದಾರೆ.
ಸ್ಥಳಕ್ಕೆ ತೆರಕಣಾಂಬಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಭಿ ಹಾಗೂ ಆತನ ಕುಟುಂಬಸ್ಥರನ್ನು ಬಂಧಿಸಿದ್ದಾರೆ.










