ತಾಲಿಬಾನಿಗಳ ಕ್ರೌರ್ಯ : ಪತಿ, ಮಕ್ಕಳ ಎದುರೇ ಗರ್ಭಿಣಿ ಮಹಿಳೆಗೆ ಗುಂಡಿಕ್ಕಿ ಹತ್ಯೆ…

80
firstsuddi

ಕಾಬೂಲ್ : ಆಫ್ಘಾನಿಸ್ತಾನವನ್ನು ತಾಲಿಬಾನ್ ಸಂಪೂರ್ಣವಾಗಿ ಕೈವಶ ಮಾಡಿಕೊಂಡ ಬಳಿಕ ತಾಲಿಬಾನಿಗಳ ಕ್ರೌರ್ಯ ಮುಂದುವರೆದಿದೆ. 8 ತಿಂಗಳ ಗರ್ಭಿಣಿ, ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಆಕೆಯ ಪತಿ ಹಾಗೂ ಮಕ್ಕಳ ಎದುರೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಅಫ್ಘಾನಿಸ್ತಾನದ ಘೋರ್ ಪ್ರಾಂತ್ಯದ ಕೇಂದ್ರ ನಗರದ ಫಿರೋಜ್ಕೋಹ್ ನಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳಾ ಅಧಿಕಾರಿಯನ್ನು ಬಾನು ನೆಗರ್ ಎಂದು ಗುರುತಿಸಲಾಗಿದೆ. ಬಾನು ನೆಗರ್ ಸ್ಥಳೀಯ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮಹಿಳಾ ಅಧಿಕಾರಿಯನ್ನು ತಾಲಿಬಾನಿಗಳು ಗುಂಡಿಟ್ಟು ಕೊಂದು ಬಳಿಕ ಆಕೆಯ ಮುಖವನ್ನು ವಿರೂಪಗೊಳಿಸಿದ್ದಾರೆ.