ತಿರುಪತಿ(ಆಂಧ್ರಪ್ರದೇಶ) : ತಿರುಪತಿ ತಿಮ್ಮಪ್ಪನ ಭಕ್ತರಿಗೆ ಟಿಟಿಡಿ ( ತಿರುಮಲ-ತಿರುಪತಿ ದೇವಸ್ಥಾನಂ)ಸಿಹಿಸುದ್ದಿ ನೀಡಿದ್ದು, ಇಂದಿನಿಂದ ತಿಮ್ಮಪ್ಪನ ದೇಗುಲದಲ್ಲಿ ಸರ್ವದರ್ಶನಕ್ಕೆ ಅವಕಾಶ ಕಲ್ಪಿಸಿದೆ.
ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯಲಿದ್ದು, ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ ನೀಡಲಾಗಿದೆ. ಪ್ರತಿದಿನ 2 ಸಾವಿರ ಟೋಕನ್ ವಿತರಿಸಲಾಗುತ್ತದೆ. ಈ ಮೊದಲು ಸರ್ವದರ್ಶನಕ್ಕೆ 8 ಸಾವಿರ ಟೋಕನ್ ವಿತರಿಸಲಾಗುತ್ತಿತ್ತು.
ಕೊರೊನಾ ಹಾವಳಿಯ ಕಾರಣಕ್ಕೆ ಏಪ್ರಿಲ್ 11ರಿಂದ ಸರ್ವದರ್ಶನ ಟೋಕನ್ ಗಳನ್ನು ನೀಡುವುದನ್ನು ನಿಲ್ಲಿಸಲಾಗಿತ್ತು. ಈಗ ಮತ್ತೆ ಸರ್ವದರ್ಶನಕ್ಕೆ ಅವಕಾಶ ಕಲ್ಪಿಸಿರುವುದು ಭಕ್ತರಲ್ಲಿ ಸಂತಸ ಮೂಡಿಸಿದೆ.










