ತಿರುವನಂತಪುರಂ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಂಗಳೂರಿನವರೆಗೆ ವಿಸ್ತರಿಸಿ ರೈಲ್ವೆ ಮಂಡಳಿ ಆದೇಶ…

46
firstsuddi

ಮಂಗಳೂರು: ತಿರುವನಂತಪುರಂ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಣೆ ಮಾಡಿ ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ.

ಹೊಸ ವೇಳಾಪಟ್ಟಿಯ ಪ್ರಕಾರ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಮಧ್ಯಾಹ್ನ 3.05 ಕ್ಕೆ ತಿರುವನಂತಪುರಂಅನ್ನು ತಲುಪಲಿದೆ.

ತಿರುವನಂತಪುರದಿಂದ ಸಂಜೆ 4.05 ಕ್ಕೆ ಹೊರಟು ರಾತ್ರಿ 12.40ಕ್ಕೆ ಮಂಗಳೂರನ್ನು ತಲುಪಲಿದೆ. ಬುಧವಾರ ಹೊರತುಪಡಿಸಿ ವಾರದ ಆರು ದಿನಗಳೂ ಈ ರೈಲು ಸಂಚರಿಸಲಿದೆ.

ಮಂಗಳೂರಿನವರೆಗೆ ರೈಲನ್ನು ವಿಸ್ತರಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಅದನ್ನು ಅನುಮೋದಿಸಿದ್ದಕ್ಕಾಗಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.