ತೀವ್ರ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಅಂಗೀಕಾರ…

202
firstsuddi

ಬೆಂಗಳೂರು : ತೀವ್ರ ವಿರೋಧಕ್ಕೆ ಕಾರಣವಾಗಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ನೀತಿಯನ್ನು ಜಾರಿಗೆ ತರಲು ಮುಂದಾಗಿದೆ ಎಂದು ನಿನ್ನೆ ಭಾರತ್ ಬಂದ್ ಮಾಡಲಾಗಿತ್ತು. ಅಲ್ಲದೇ ಸೆ. 28ರಂದು ರಾಜ್ಯದ ರೈತ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿದೆ. ಇಷ್ಟು ವಿರೋಧದ ನಡುವೆಯೇ ಇಂದು ವಿಧಾನಸಭೆಯಲ್ಲಿ ಮಸೂದೆಯನ್ನು ಅಂಗೀಕಾರ ಮಾಡಲಾಗಿದೆ.

ಈ ಮಸೂದೆಯ ಪ್ರಕಾರ ಕೃಷಿ ಭೂಮಿಯನ್ನು ಯಾರು ಬೇಕಾದರೂ ಖರೀದಿಸಬಹುದಾಗಿದೆ. ಈ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತಿದ್ದಾಗಲೇ ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು. ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಲಾಗಿದೆ.