ತುಮಕೂರು:ಮಹಾಮಾರಿ ಡೆಂಗ್ಯೂ ಜ್ವರಕ್ಕೆ 7 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಪಾವಗಡ ಪಟ್ಟಣದ ಬಾಬೈಯನ ಗುಡಿಬೀದಿಯಲ್ಲಿ ನಡೆದಿದೆ. ಹರೀಶ್ ಕುಮಾರ್ ಎನ್ನುವವರ ಪುತ್ರ ಕರುಣಾಕರ್ ಮೃತ ಬಾಲಕ. ಪಾವಗಡದ ಸುಧಾ ಕ್ಲಿನಿಕ್‍ನಲ್ಲಿ ಬಾಲಕ ಕಳೆದ 8 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೊನೆ ಕ್ಷಣದವರೆಗೂ ಡೆಂಗ್ಯೂ ಜ್ವರ ಎಂದು ವೈದ್ಯರು ಪೋಷಕರಿಗೆ ತಿಳಿಸಿಲ್ಲ. ಹೀಗಾಗಿ ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತದೇಹದೊಂದಿಗೆ ಕುಟುಂಬಸ್ಥರು ಸುಧಾ ಕ್ಲಿನಿಕ್ ಮುಂದೆ ಪ್ರತಿಭಟನೆ ಮಾಡಲಾಗಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










