ತುಮಕೂರು: ನವ ವಿವಾಹಿತೆಯೊಬ್ಬಳು ಕೆರೆಗೆ ಬಿದ್ದು ಸಾವನಪ್ಪಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಶಿಡ್ಲನಹಟ್ಟಿ ಗ್ರಾಮದಲ್ಲಿ ನಡೆದಿದೆ.
ರಕ್ಷಿತಾ ಮೃತ ನವ ವಿವಾಹಿತೆ. ಈಕೆ ಕುಣಿಗಲ್ ಪಟ್ಟಣದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.
ಕಳೆದ ಇಪ್ಪತ್ತು ದಿನಗಳ ಹಿಂದೆ ಸೋದರ ಮಾವನೊಂದಿಗೆ ಕುಟುಂಬಸ್ಥರು ಒಪ್ಪಿಸಿ ಮದುವೆ ಮಾಡಿಕೊಡಲಾಗಿತ್ತು. ಮದುವೆ ಬಳಿಕ ರಕ್ಷಿತಾಳನ್ನು ಕಾಲೇಜಿನಿಂದ ಬಿಡಿಸಿದ್ದರು ಎಂದು ತಿಳಿದು ಬಂದಿದೆ. ಆರೋಗ್ಯ ಸಮಸ್ಯೆ ಕಾರಣದಿಂದ ಖಿನ್ನತೆಗೆ ಒಳಗಾಗಿದ್ದ ರಕ್ಷಿತಾ ಕೆರೆಗೆ ಬಿದ್ದಿದ್ದಾಳೆ ಎನ್ನಲಾಗಿದೆ.
ಈ ಕುರಿತು ಅಮೃತೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ(ಯುಡಿಆರ್) ದಾಖಲಾಗಿದೆ.










