ತುಮಕೂರು : ಕೇರಳ ಮೂಲದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ತಗುಲಿದ ಕೊರೊನಾ…

76
firstsuddi

ತುಮಕೂರು : ಕೇರಳದಿಂದ ಜಿಲ್ಲೆಗೆ ವ್ಯಾಸಂಗ ಮಾಡಲು ಬಂದಿರುವ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ನಗರದ ಸಿದ್ದಗಂಗಾ ಹಾಗೂ ವಾದಿರಾಜ್ ನರ್ಸಿಂಗ್ ಕಾಲೇಜಿನಲ್ಲಿರುವ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಇವರೆಲ್ಲರೂ ಕೇರಳದಿಂದ ಬಂದ ವಿದ್ಯಾರ್ಥಿಗಳಾಗಿದ್ದು, ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ 15 ವಿದ್ಯಾರ್ಥಿಗಳ ಸ್ವಾಬ್ ನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರು ತಿಳಿಸಿದ್ದಾರೆ.

18 ವರ್ಷ ಮತ್ತು ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಕನಿಷ್ಟ ಒಂದು ಡೋಸ್ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಮಾತ್ರ ತರಗತಿ ಅವಕಾಶ ನೀಡಲಾಗಿದ್ದು, ಲಸಿಕೆ ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೆ ನಿರ್ಬಂಧ ಹೇರಲಾಗಿದೆ. ಈ ಕುರಿತು ಎಲ್ಲಾ ಕಾಲೇಜುಗಳಿಗೆ ಆದೇಶ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.