ತುಮಕೂರು: ಇಂದು ಮುಂಜಾನೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಸಂತಾಪವನ್ನು ಸೂಚಿಸಿದ್ದಾರೆ.
ಟ್ವೀಟ್ ನಲ್ಲಿ ಏನಿದೆ?
ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ. ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ.ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು.ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ.ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು: PM
— PMO India (@PMOIndia) August 25, 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪವನ್ನು ಸೂಚಿಸಿದ್ದು, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.










