ತೆಲಂಗಾಣ ಉದ್ಯಮಿ ಕೊಲೆ ಪ್ರಕರಣ; ಸ್ಥಳ ಮಹಜರು ವೇಳೆ ಕೊಡಗು ಪೊಲೀಸರ ಕಣ್ತಪ್ಪಿಸಿ ಆರೋಪಿ ಪರಾರಿ.

35

ಮಡಿಕೇರಿ: ಇತ್ತೀಚೆಗೆ ಕೊಡಗಿನಲ್ಲಿ ತೆಲಂಗಾಣ ಮೂಲದ ರಮೇಶ್ ಎಂಬುವವರ ಮೃತದೇಹವನ್ನು ಎರಡನೇ ಪತ್ನಿ ನಿಹಾರಿಕಾ ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆ ಮಾಡಿ 800 ಕಿ.ಮೀ ದೂರದ ಕೊಡಗಿಗೆ ಬಂದು ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದರು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರುಗಾಗಿ ಕೊಡಗಿಗೆ ಆರೋಪಿಯನ್ನು ಕರೆತಂದಿದ್ದ ವೇಳೆ ಪೊಲೀಸರ ಕಣ್ತಪ್ಪಿಸಿ ಆರೋಪಿ ಪರಾರಿಯಾಗಿದ್ದಾನೆ. ಕೊಡಗು ಪೊಲೀಸರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ಇದೀಗ ಪೊಲೀಸರ ನಿರ್ಲಕ್ಷ್ಯಕ್ಕೆ ಮೇಲಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸ್‍ಪಿ ಕೆ.ರಾಮರಾಜನ್ ಅವರು ಮಾತನಾಡಿ, ಕೊಡಗು ಪೊಲೀಸರು ಮೂವರು ಆರೋಪಿಗಳನ್ನು ಅಕ್ಟೋಬರ್ 31ರಂದು ಹೈದರಾಬಾದ್‍ಗೆ ತೆರಳಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ಹೈದರಾಬಾದ್‍ನ ಉಪ್ಪಲ್-ಭುವನಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಅಪರಾಧ ಸ್ಥಳದಲ್ಲಿ ಮಹಜರ್ ಪ್ರಕ್ರಿಯೆ ನಡೆಸಿದ್ದರು. ನಂತರ ಪೊಲೀಸರು ರಾತ್ರಿ ಹೈದರಾಬಾದ್‍ನ ಖಾಸಗಿ ಹೋಟೆಲ್‍ನಲ್ಲಿ ತಂಗಿದ್ದರು. ಆದಾಗ್ಯೂ, ಅಂಕುರ್ ಕೈಕೋಳವನ್ನು ತೆರೆದುಕೊಂಡು ಮೂರನೇ ಮಹಡಿಯಲ್ಲಿರುವ ಹೋಟೆಲ್ ಕೊಠಡಿಯ ಕಿಟಕಿಯಿಂದ ಪರಾರಿಯಾಗಿದ್ದಾನೆ. ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಶೀಘ್ರದಲ್ಲೇ ಅಂಕುರ್‍ನನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.