ತೆಲುಗು ಧಾರಾವಾಹಿ ಶೂಟಿಂಗ್ ಸೆಟ್‌ನಲ್ಲಿ ಕಿರಿಕ್ – ಕನ್ನಡದ ನಟ ಚಂದನ್‍ಗೆ ಕಪಾಳ ಮೋಕ್ಷ…

82
firstsuddi

ಹೈದರಾಬಾದ್ : ತೆಲುಗು ಧಾರಾವಾಹಿಯೊಂದರ ಚಿತ್ರೀಕರಣದ ವೇಳೆ ಕನ್ನಡ ಕಿರುತೆರೆಯ ಖ್ಯಾತ ನಟ ಚಂದನ್ ಕುಮಾರ್ ಮೇಲೆ ಹಲ್ಲೆ ನಡೆದಿದೆ. ಕಳೆದ ಒಂದು ತಿಂಗಳ ಹಿಂದೆ ಹಲ್ಲೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.

ಹೈದರಾಬಾದ್ ನಲ್ಲಿ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿಯ ಶೂಟಿಂಗ್ ನಡೆಯುತ್ತಾ ಇತ್ತು. ಈ ಧಾರಾವಾಹಿಯಲ್ಲಿ ಚಂದನ್ ಕುಮಾರ್ ಅವರೇ ಮುಖ್ಯ ಪಾತ್ರ ನಿರ್ವಹಿಸುತ್ತಾ ಇದ್ದರು. ಶೂಟಿಂಗ್ ವೇಳೆ ಅಲ್ಲಿನ ಕ್ಯಾಮೆರಾಮೆನ್ ಹಾಗೂ ತಂತ್ರಜ್ಞರ ಜೊತೆ ಚಂದನ್ ಕುಮಾರ್ ಕಿರಿಕ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಧಾರಾವಾಹಿ ಸೆಟ್ ನಲ್ಲಿ ಚಂದನ್ ಕುಮಾರ್ ಅವರೇ ಕ್ಯಾಮೆರಾ ಅಸಿಸ್ಟೆಂಟ್ ಮೇಲೆ ಮೊದಲು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಜಗಳ ಆಗಿದೆ. ಈ ವೇಳೆ ತಂತ್ರಜ್ಞರೊಬ್ಬರು ಚಂದನ್ ಗೆ ಕಪಾಳ ಮೋಕ್ಷ ಮಾಡಿದ್ದಾರೆ.

ಚಂದನ್ ಈ ಹಿಂದೆ ಲಕ್ಷ್ಮೀ ಬಾರಮ್ಮ ಧಾರಾವಾಹಿ ಮೂಲಕ ಕರ್ನಾಟಕದ ಮನೆ ಮಾತಾಗಿದ್ದರು. ಬಳಿಕ ‘ರಾಧಾ ಕಲ್ಯಾಣ’, ‘ಲಕ್ಷ್ಮೀ ಬಾರಮ್ಮ’, ‘ಸರ್ವ ಮಂಗಳ ಮಾಂಗಲ್ಯೇ’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದರು. ಸದ್ಯ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವ ಮರಳಿ ಮನಸ್ಸಾಗಿದೆ ಎಂಬ ಧಾರಾವಾಹಿಯಲ್ಲಿ ಚಂದನ್ ಕುಮಾರ್ ನಟಿಸುತ್ತಿದ್ದಾರೆ.